ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳು ಡೆಂಘೀಗೆ ಬಲಿಯಾಗುತ್ತಿದ್ದಾರೆ. ಈ ಮಧ್ಯೆ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.
ಹಾವೇರಿಯ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಬಾಲಕನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕ ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಗೈತ್ತು. ಗುಣಮುಖನಾಗಿ ಮನೆಗೆ ವಾಪಾಸ್ ಆಗಿದ್ದ ಬಾಲಕನಿಗೆ ಮತ್ತೆ ಜ್ವರ ಕಾಣಿಸಿಕೊಂಡಿದೆ.
ದಿನಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕನಿಗೆ ಜಾಂಡೀಸ್ ಇದೆ ಎಂಂದು ರಕ್ತದ ಮಾದರಿ ಪರೀಕ್ಷಿಸಲಾಗಿತ್ತು. ಈ ವೇಳೆ ಬಾಲಕನಲ್ಲಿ ಇಲಿ ಜ್ವರ ಸೋಂಕು ದೃಢಪಟ್ಟಿದೆ.