ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ
ಡೆಂಗ್ಯೂ ಹರಡುವುದನ್ನು ತಡೆಯಲು ಹಾಗೂ ಡೆಂಗ್ಯೂ ನಿಯಂತ್ರಿಸಲು ತೆಗೆದುಕೊಂಡ ಮುಂಜಾಗೃತಾ ಕ್ರಮಗಳ ಬಗ್ಗೆ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ . ರಾಜ್ಯದಲ್ಲಿ ಇದುವರೆಗೆ 7362 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಜನರು ಡೆಂಗ್ಯೂಗೆ ಬಲಿಯಾಗಿದ್ದಾರೆ
ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. . ದೆ..