Ad imageAd image

ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ : ಮಧು ಬಂಗಾರಪ್ಪ 

Bharath Vaibhav
ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ : ಮಧು ಬಂಗಾರಪ್ಪ 
WhatsApp Group Join Now
Telegram Group Join Now

ಶಿವಮೊಗ್ಗ : ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು 8ನೇ ತರಗತಿವರೆಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿವರೆಗೆ ವಿಸ್ತರಿಸಲಾಗಿದೆ.

ರಾಗಿ ಮಾಲ್ಟ್ ನೀಡಲಾಗುತ್ತಿದೆ. ಹಾಗೂ ವಾರದಲ್ಲಿ ಒಂದು ನೀಡುತ್ತಿದ್ದ ಮೊಟ್ಟೆಯನ್ನು 2 ದಿನಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರದಲ್ಲಿ 6 ದಿನವೂ ಮೊಟ್ಟೆ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇತ್ತು. ಕಡಿಮೆ ಕಾಲಮಿತಿಯಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿ ಶಿಕ್ಷಣ ನೀಡಲಾಗುತ್ತಿದೆ. ಶಿಥಿಲಾವಸ್ಥೆಯಲ್ಲಿ ಇರುವ ಶಾಲಾ ಕಟ್ಟಡ ಮತ್ತು ಕೊಠಡಿಗಳನ್ನು ಹಂತ ಹಂತವಾಗಿ ರಿಪೇರಿ ಮಾಡಲಾಗುತ್ತಿದೆ.

1600 ಕೊಠಡಿ ರಿಪೇರಿ ಮತ್ತು ಅವಶ್ಯವಿರುವೆಡೆ ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲೇ ಮಂಜೂರಾತಿ ದೊರೆಯಲಿದೆ. ರಾಜ್ಯದಲ್ಲಿ ಹೊಸದಾಗಿ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು, ಉನ್ನತೀಕರಿಸಲಾಗುವುದು ಎಂದು ಹೇಳಿದ್ದ ಪ್ರಕಾರ ಹಂತ ಹಂತವಾಗಿ ಕೆಪಿಎಸ್ ಶಾಲೆ ಉನ್ನತೀಕರಣ ಆಗುತ್ತಿದೆ.

ಕೆಪಿಎಸ್ ಶಾಲೆಯಲ್ಲಿ ಕನ್ನಡ, ಇಂಗ್ಲಿಷ್ ಮಾಧ್ಯಮ, ಎಲ್‍ಕೆಜಿ, ಯುಕೆಜಿ, ಲೈಬ್ರರಿ ಸೇರಿದಂತೆ ಉತ್ತಮ ಸೌಲಭ್ಯಗಳು ದೊರೆಯಲಿದ್ದು 500 ರಿಂದ 1 ಸಾವಿರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮತ್ತು10 ಲಕ್ಷ ಮಕ್ಕಳು ಓದುವ ಗುರಿ ಹೊಂದಲಾಗಿದೆ.

ಮುಂದಿನ ವರ್ಷ 3 ಲಕ್ಷ ವಿದ್ಯಾರ್ಥಿಗಳು ಇಲ್ಲಿ ಓದುವ ಗುರಿ ಹೊಂದಲಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸಲಾಗುವುದು. ಡಿಡಿಪಿಐ, ಬಿಇಓ ಗಳು ಈ ಕಡೆ ಹೆಚ್ಚಿನ ಗಮನ ನೀಡಬೇಕು. ಶಾಲಾ ಹಾಜರಾತಿ ಕುರಿತು ಸುಳ್ಳು ಹೇಳುವಂತಿಲ್ಲ.

ಸ್ಯಾಟ್ಸ್ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ಸರ್ಕಾರಿ ಶಾಲೆಯಲ್ಲೇ ಅತ್ಯುತ್ತಮ ಶಿಕ್ಷಕರಿದ್ದು ಉತ್ತಮ ಫಲಿತಾಂಶ ನೀಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು.

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಓದಿನಲ್ಲಿ ಹಿಂದುಳಿದ ಮಕ್ಕಳಿಗೆ ಸಂಜೆ ಪಾಠ ವ್ಯವಸ್ಥೆ ಮಾಡಿದಲ್ಲಿ ಫಲಿತಾಂಶ ಹೆಚ್ಚಲಿದೆ. ರಾಜ್ಯದ ಎಲ್ಲ ಶಾಲೆಗಳಲ್ಲಿ ಶೇ.100 ಫಲಿತಾಂಶ ಬರಬೇಕು. ಹೆಮ್ಮೆಯಿಂದ ಸರ್ಕಾರಿ ಶಾಲೆಗೆ ಮಕ್ಕಳು ಬರುವಂತೆ ಆಗಬೇಕು ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!