ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭಾರೀ ಮಳೆಗೆ ಗುಡ್ಡ ಕುಸಿದು ಏಳು ಮಂದಿ ಸಾವನ್ನಪಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ.ಈ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ದೃಢಪಡಿಸಿರುವ ಕಾಗೇರಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಈ ಘಟನೆ ನಡೆದಿದ್ದು, ಗುಡ್ಡ ಕುಸಿದು ಏಳು ಮಂದಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಮಣ್ಣಿನಡಿ ಸಿಲುಕಿರುವ ರಕ್ಷಿಸಲು ಸೂಚನೆ ನೀಡಲಾಗಿದೆ. ಇದೀಗ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮಹಿಳೆಯ ಶವವನ್ನು ಎನ್ ಡಿಆರ್ ಎಫ್ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ ಡಿಆರ್ ಎಫ್ಸಿಬ್ಬಂದಿಗಳು ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.