ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ್ದು, ಇನ್ಮುಂದೆ ಅನರ್ಹ 1.70 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬರಲ್ಲ.
ಹೌದು, ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು.
ಸದ್ಯ ಈ ಯೋಜನೆಯಲ್ಲಿ ಕೆಲ ನಿಯಮಗಳನ್ನು ಸರ್ಕಾರ ಬಿಗಿಗೊಳಿಸಲು ಮುಂದಾಗಿದೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, 1.70 ಲಕ್ಷ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇವರು ಯೋಜನೆಯ ಮಾನದಂಡಗಳನ್ನು ಹೊಂದಿಲ್ಲವಾದ್ದರಿಂದ ಯೋಜನೆಗೆ ಅನರ್ಹರಾಗಿದ್ದಾರೆ. ಇವರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುವುದಿಲ್ಲ. ಇನ್ನುಳಿದಂತೆ ಇತರರಿಗೆ ಯೋಜನೆಯ ಪ್ರಯೋಜನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.