ಬೆಂಗಳೂರು : ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.