Ad imageAd image

‘ಸಿಎಂ’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ದಿನ ಸಮೀಪಸಿದೆ : ಬಿವೈ ವಿಜಯೇಂದ್ರ

Bharath Vaibhav
‘ಸಿಎಂ’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ದಿನ ಸಮೀಪಸಿದೆ : ಬಿವೈ ವಿಜಯೇಂದ್ರ
by vijayendra
WhatsApp Group Join Now
Telegram Group Join Now

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ ಅವರ ಗಮನಕ್ಕೆ ಬಾರದೆ ಹಣವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ.ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ದಿನ ಸಮೀಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಹಗರಣ ಹಿನ್ನೆಲೆಯಲ್ಲಿ ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಎಂ ಸದನದಲ್ಲಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ. ಸಿಎಂ ಈ ಹಗರಣದಿಂದ ತಪ್ಪಿಸಿ ಕೊಂಡು ಹೋಗಲು ಸಾಧ್ಯವಿಲ್ಲ ಎಂಬುದು ಸತ್ಯ ಎಂದು ವಿಜಯೇಂದ್ರ ಎಚ್ಚರಿಸಿದರು.

ಕೇವಲ ಮಾಜಿ ಸಚಿವ ನಾಗೇಂದ್ರ, ನಿಗಮದ ಅಧ್ಯಕ್ಷ ದದ್ದಲ್ ಅವರಷ್ಟೇ ಅಲ್ಲದೆ ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ರಾಜ್ಯದ ಐದು ಸಚಿವರು ಇ.ಡಿ. ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!