Ad imageAd image

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

Bharath Vaibhav
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು
WhatsApp Group Join Now
Telegram Group Join Now

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.

ಇದೀಗ ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ.

ಅಲ್ಲದೇ ಸಂತ್ರಸ್ತರನ್ನು ಭೇಟಿಯಾಗುವಂತಿಲ್ಲ. ಸಾಕ್ಷ್ಯ ನಾಶಕ್ಕೆ ಯತ್ನಿಸುವಂತಿಲ್ಲ. ತನಿಖೆಗೆ ವಿಚಾರಣೆಗಳಿಗೆ ಹಾಜರಾಗುವಂತೆ ಕೋರ್ಟ್ Wಸೂಚಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!