ನವದೆಹಲಿ: ಆಭರಣ ಪ್ರಿಯರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿ ಸುದ್ದಿ ನೀಡಿದ್ದಾರೆ. ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಕಡಿತ ಗೊಳಿಸುವುದಾಗಿ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ ವಿತ ಸಚಿವೆ ನಿರ್ಮಲಾ ಸೀತಾರಾಮನ್, ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.6ರಷ್ಟು ಕಡಿತಗೊಳಿಸುವುದಾಗಿ ತಿಳಿಸಿದರು.
ಈ ಮೂಲಕ ಚಿನ್ನ, ಬೆಳ್ಳಿ ಹಾಗೂ ಪ್ಲಾಟಿನಂ ಬೆಲೆ ಇಳಿಕೆಯಾಗಲಿದೆ. ಇನ್ನು ಮೊಬೈಲ್, ಚಾರ್ಜರ್, ಸೋಲಾರ್ ಪ್ಯಾನಲ್ ಗಳ ಬೆಲೆ ಕೂಡ ಇಳಿಕೆಯಾಗಲಿದೆ.