ಬೆಳಗಾವಿ : ಜಿಲ್ಲೆಯಲ್ಲಿ ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ, ಕಿತ್ತೂರು, ಖಾನಾಪುರ ಮತ್ತು ಬೈಲಹೊಂಗಲ ತಾಲ್ಲೂಕಿನ ಶಾಲೆಗಳಿಗೆ ಜು.24 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್. ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಾಗೂ ಅಂಗನವಾಡಿಗೆ ರಜೆ ಘೋಷಣೆ ಮಾಡಲಾಗಿದೆ.
ಖಾನಾಪುರ ಮತ್ತು ಬೆಳಗಾವಿ ತಾಲೂಕಿನಲ್ಲಿ ಮಾತ್ರ ಪದವಿ ಪೂರ್ವ ಕಾಲೇಜುಗಳಿಗೂ ರಜೆ ನೀಡಲಾಗಿದೆ. ಮಳೆ ಹಿನ್ನಲೆಯಲ್ಲಿ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಸತತ ಮೂರನೇ ಬಾರಿಗೆ ರಜೆ ನೀಡಲಾಗಿದೆ.