ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಮರ್ಡರ್ ಆಗಿದ್ದು, ಕತ್ತು ಕೊಯ್ದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್ ಪಿಜಿಯೊಂದರಲ್ಲಿ ದುಷ್ಕರ್ಮಿಗಳು ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ (೨೪) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.