ಗಾಝಾದ ದೇರ್ ಅಲ್ ಬಾಲಾಹ್ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 30 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಖದೀಜಾ ಶಾಲೆಯಲ್ಲಿ ಹುದುಗಿರುವ ಹಮಾಸ್ ಕಮಾಂಡ್ ಸೆಂಟರ್ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ.
ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಮತ್ತು ಹಮಾಸ್ ನಡೆಸುತ್ತಿರುವ ಸರ್ಕಾರಿ ಮಾಧ್ಯಮಗಳನ್ನ ಉಲ್ಲೇಖಿಸಿ ವರದಿಗಳು ತಿಳಿಸಿವೆ.
ಮಧ್ಯ ಗಾಝಾದ ಖದೀಜಾ ಶಾಲೆಯ ಕಾಂಪೌಂಡ್ ಒಳಗಿರುವ ಹಮಾಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ.
ಹಮಾಸ್ ಭಯೋತ್ಪಾದಕರು ಈ ಕಾಂಪೌಂಡ್’ನ್ನ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ಅಭಿವೃದ್ಧಿಪಡಿಸಲು ಮತ್ತು ಸಂಗ್ರಹಿಸಲು ಮತ್ತು ಇಸ್ರೇಲಿ ಪಡೆಗಳು ಮತ್ತು ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸಲು ಅಡಗುವ ಸ್ಥಳವಾಗಿ ಬಳಸಿದ್ದಾರೆ ಎಂದು ಇಸ್ರೇಲ್ ಮಿಲಿಟರಿಯನ್ನು ಉಲ್ಲೇಖಿಸಿ ಜೆರುಸಲೇಮ್ ಪೋಸ್ಟ್ ವರದಿ ಮಾಡಿದೆ.
!