ಚಿಕ್ಕೋಡಿ: ಧೈರ್ಯದಿಂದ ಇದ್ದರಿ ನಿಮ್ಮೊಂದಿಗೆ ನಾವಿದ್ದೇವೆ – ಶಾಸಕ ಗಣೇಶ ಹುಕ್ಕೇರಿ.
ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಿಗೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.
ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಾದ ಹಳೆ ಯಡೂರ, ಹೊಸ ಯಡೂರ, ಚಂದೂರ ಟೆಕ್, ಚಂದೂರ, ಯಡೂರವಾಡಿ, ಮಾಂಜರಿ, ಮಾಂಜರಿವಾಡಿ, ಹಾಗೂ ಇಂಗಳಿ ಗ್ರಾಮಗಳಿಗೆ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಶಾಸಕರು ಭೇಟಿ ನೀಡಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು ಪ್ರವಾಹದ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತ ಸಂಪೂರ್ಣವಾಗಿ ಸಿದ್ಧವಾಗಿದೆ, ನಮ್ಮ ಸರ್ಕಾರವು ಕೂಡ ಪ್ರವಾಹ ಸಂತ್ರಸ್ತರ ಜೊತೆಗಿದ್ದೇವೆ.
ನಾನು ಹಾಗೂ ವಿಧಾನ ಪರಿಷತ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶಾಸಕರಾದ ಶ್ರೀ ಪ್ರಕಾಶ ಹುಕ್ಕೇರಿಯವರು ನದಿ ತೀರದಲ್ಲಿ ಜನರ ಸ್ಥಳಾಂತರಕ್ಕೆ ಬೋಟಗಳ ವ್ಯವಸ್ಥೆ ಮಾಡಿದ್ದೇವೆ, ಎನ್ ಡಿ ಆರ್ ಎಫ್ ತಂಡವು ಕೂಡ ನಾಳೆ ಯಡೂರ ಗ್ರಾಮಕ್ಕೆ ಆಗಮಿಸಲಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಚಿಕ್ಕೋಡಿ ಉಪ ವಿಭಾಗ ಅಧಿಕಾರಿ ಶ್ರೀ ಸುಭಾಷ ಸಂಪಗಾಂವೆ, ತಹಶೀಲ್ದಾರ್ ಶ್ರೀ ಕುಲಕರ್ಣಿ, ತಾಲೂಕಾ ಪಂಚಾಯತ್ ಈ ಓ ಕಾದ್ರೋಳಿ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ