ಬೆಳಗಾವಿ: ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಕನ್ನಡ ಬಳಗ ವಿಭಾಗವು ಒಂದು ವಾರದವರೆಗೆ ಆಯೋಜಿಸಿದ್ದ “ಕನ್ನಡ ನುಡಿ ವೈಭವ ಕಾರ್ಯಕ್ರಮ” ಇದರ ಸಮಾರೋಪ ಸಮಾರಂಭ ಜೂನ್ 22 ಸೋಮವಾರದಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಧಾರವಾಡದ ಶಿಕ್ಷಣ ತಜ್ಞ ಸುರೇಶ ವಿ.ಕುಲಕರ್ಣಿ ಆಗಮಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕನ್ನಡ ಭಾಷೆಯ ಮಹತ್ವದ ಕುರಿತು ತಿಳಿಸಿದರು.
ದ.ರಾ. ಬೇಂದ್ರೆಯವರೊಂದಿಗೆ ತಮ್ಮ ನೆನಪುಗಳನ್ನು ಹಂಚಿಕೊಂಡು, ಕನ್ನಡ ಭಾಷೆಗೆ ಪ್ರೋತ್ಸಾಹ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ ಮಾತನಾಡಿ, ಇಂತಹ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ಕನ್ನಡ ಭಾಷೆಯ ಬೆಳವಣಿಗೆ ಸಾಧ್ಯ ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯ ವ್ಯಾಪ್ತಿಯ ಮಹತ್ವವನ್ನು ಎತ್ತಿ ತೋರಿಸಿದರು. ಕಾಲೇಜಿನ ಕನ್ನಡ ಬಳಗ ವಿಭಾಗದಿಂದ ವಿವಿಧ ಸ್ಪರ್ಧೆಗಳೊಂದಿಗೆ 9 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬಹುಮಾನ ವಿತರಣಾ ಸಮಾರಂಭ ನಡೆಯಿತು.
ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ವರದಿ ಮಹಾಂತೇಶ ಎಸ್ ಹುಲಿಕಟ್ಟಿ