ಆಲಮಟ್ಟಿ: –ಮಹಾರಾಷ್ಟ್ರದ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಾಗುತ್ತಿದ್ದು, ಆಲಮಟ್ಟಿ ಜಲಾಶಯದಿಂದ 3.50ಲಕ್ಷ ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ.
ಜಲಾಶಯಕ್ಕೆ 3,23,259 ಕ್ಯುಸೆಕ್ ಒಳಹರಿವು ಇದ್ದು, ಜಲಾಶಯದ ಮಟ್ಟ 517.53 ಮೀ ಇದೆ, ಜಲಾಶಯದಲ್ಲಿ ಟಿಎಂಸಿ ನೀರು ಸಂಗ್ರಹವಾಗಿದೆ.
ಆಲಮಟ್ಟಿ ಜಲಾಶಯದಿಂದ 3.50 ಲಕ್ಷ ಕ್ಯುಸೆಕ್ ನೀರು ಬಿಟ್ಟಾಗ ಕೃಷ್ಣಾ ತೀರದ ಅರಳದಿನ್ನಿ, ಯಲಗೂರು ಸೇರಿದಂತೆ ಕೆಲ ಗ್ರಾಮಗಳ ಜಮೀನು ಮುಳುಗಡೆಯಾಗಲಿದೆ.
ಈಗಾಗಲೇ ತಾಲ್ಲೂಕು ಆಡಳಿತ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಕೃಷ್ಣಾ ತೀರ ಗ್ರಾಮದಲ್ಲಿ ಜನ, ಜಾನುವಾರುಗಳು ನದಿ ನೀರಿಗೆ ಇಳಿಯದಂತೆ ಡಂಗುರ ಸಾರಿ ಮುನ್ಸೂಚನೆ ನೀಡಿದ್ದಾರೆ.
ವರದಿ :ಅಲಿ ಮಕಾನದಾರ