ರಾಯಚೂರು : ರಾಯಚೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಮಟನ್ ಊಟ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಈ ಒಂದು ದುರ್ಘಟನೆಯೂ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರಿನಲ್ಲಿ ನಡೆದಿದೆ.
ರಾತ್ರಿ ಅಡುಗೆ ಮಾಡಿ ಮಟನ್ ಊಟ ಮಾಡಿದ್ದ ಭೀಮಣ್ಣ (60),ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ (17) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಇನ್ನೂ ಘಟನೆಯಲ್ಲಿ ಮಲ್ಲಮ್ಮ ಎನ್ನುವವರ ಸ್ಥಿತಿ ಗಂಭೀರವಾಗಿದ್ದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲುಮುಟ್ಟಿದೆ. ಸಿರವಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆಯನ್ನು ಆರಂಭಿಸಿದ್ದಾರೆ.