Ad imageAd image

ಮನು ಭಾಕರ್​ಗೆ ಕೈ ತಪ್ಪಿದ ಹ್ಯಾಟ್ರಿಕ್​ ಪದಕ 

Bharath Vaibhav
ಮನು ಭಾಕರ್​ಗೆ ಕೈ ತಪ್ಪಿದ ಹ್ಯಾಟ್ರಿಕ್​ ಪದಕ 
WhatsApp Group Join Now
Telegram Group Join Now

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿದ್ದ ಮನು ಭಾಕರ್​ಗೆ ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಅವರು ಐತಿಹಾಸಿಕ ಪದಕ ಗೆಲ್ಲುವ ಅವಕಾಶವೊಂದನ್ನು ಕಳೆದುಕೊಂಡರು.

ಪದಕ ಗೆಲ್ಲುತ್ತಿದ್ದರೆ ವೈಯಕ್ತಿಕವಾಗಿ ಒಂದೇ ಆವೃತ್ತಿಯಲ್ಲಿ ಹಾಗೂ ಒಟ್ಟಾರೆಯಾಗಿ 3 ಒಲಿಂಪಿಕ್ಸ್​ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಐತಿಹಾಸಿಕ ದಾಖಲೆ ಬರೆಯಬಹುದಿತ್ತು.

ಫೈನಲ್​ ಹಂತದ ಮೊದಲ ಸುತ್ತಿನಲ್ಲಿ 6 ಅಂಕ ಗಳಿಸಿ 4ನೇ ಸ್ಥಾನಿಯಾದ ಭಾಕರ್​ ಆ ಬಳಿಕದ ಸುತ್ತಿನಲ್ಲಿ ಪ್ರಗತಿ ಸಾಧಿಸಿ 2ನೇ ಸ್ಥಾನದೊಂದಿಗೆ ಈ ಸುತ್ತು ಮುಗಿಸಿದರು. 2ನೇ ಸುತ್ತಿನಲ್ಲಿ ಒಮ್ಮೆ 6ನೇ ಸ್ಥಾನಕ್ಕೆ ಕುಸಿದರೂ ಕೂಡ ತಕ್ಷಣ ಎಚ್ಚೆತ್ತುಕೊಂಡು ಮತ್ತೆ ಯಶಸ್ಸು ಸಾಧಿಸಿದರು.

ಆದರೆ ಅಂತಿಮ ಹಂತದಲ್ಲಿ 28 ಅಂಕ ಪಡೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕೊರಿಯಾದ ಯಾಂಗ್ ಜಿನ್ ಚಿನ್ನದ ಪದಕ ಗೆದ್ದರು. ಆತಿಥೇಯ ದೇಶದ ಕ್ಯಾಮಿಲ್ಲೆ ಬೆಳ್ಳಿ, ಹಂಗೇರಿಯ ಕಂಚು ಗೆದ್ದರು.

22 ವರ್ಷದ ಮನು ಭಾಕರ್ ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು.

ಶುಕ್ರವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾಕರ್​ ಒಟ್ಟು 590 ಅಂಕ ಗಳಿಸುವ ಮೂಲಕ 2ನೇ ಸ್ಥಾನಿಯಾಗಿ ಫೈನಲ್​ ಪ್ರವೇಶಿಸಿದ್ದರು. ಪ್ರಿಸಿಷನ್​ ಸುತ್ತಿನಲ್ಲಿ 294 ಅಂಕ(97,98,99) ಗಳಿಸಿದರೆ ರ್ಯಾಪಿಡ್​ ಸುತ್ತಿನಲ್ಲಿ 296 ಅಂಕ(100,98,98) ಕಲೆಹಾಕಿದ್ದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!