ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡುತ್ತಿರುವುದು ನಾಚಿಗೇಡಿನ ಸಂಗತಿ, ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕ ಎರಡು ಪಕ್ಷಗಳು ಮುಖಂಡರಿಗೆ ಇಲ್ಲ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಅಧ್ಯಕ್ಷ ಮಹಿಮುದ್ ಅವರು ಟೀಕಿಸಿದರು, ರಾಜ್ಯದಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಾಮರ್ಥ್ಯ ವಿರೋಧಪಕ್ಷವಾಗಿ ಅವರ ಕಡೆಗೆ ಗಮನ ಹರಿಸದೆ, ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ.
ಬಿಜೆಪಿ ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆಗೆ ಸ್ವಲ್ಪವೂ ಗೌರವವಿಲ್ಲ. ಬಿಜೆಪಿ ಜೆಡಿಎಸ್ ಅಧಿಕಾರ ಅವಧಿಯಲ್ಲಿ ಬ್ರಷ್ಟಾಚಾರವೇ ನಡೆದಿಲ್ಲವೇ.? ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಪಕ್ಷದ ಮುಖಂಡರ ಭ್ರಷ್ಟಾಚಾರದ ಕುರಿತು ಈಗಾಗಲೇ ಹೇಳಿಕೆ ನೀಡಿರುವುದು ಇಡೀ ನಾಡಿಗೆ ಗೊತ್ತಿದೆ ಎಂದು ಕುಟುಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುದ್ಧ ಹಸ್ತರು ಅವರು ಕಾನೂನಿನ ಪರಿಮಿತಿಯೊಳಗೆ ತಿಳಿದುಕೊಂಡಿದ್ದಾರೆ.
ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿರುವ ಪಾದಯಾತ್ರೆ ಜನರ ದಿಕ್ಕು ತಪ್ಪಿಸುವ ಕೆಲಸವಾಗಿದೆ, ಸಿದ್ದರಾಮಯ್ಯ ಅವರನ್ನು ಯಾರಿಂದಲೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಹಿಮುದ್ ಅವರು ತಿಳಿಸಿದರು.