ನವದೆಹಲಿ : ವಿನೇಶ್ ಫೋಗಟ್ ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು.
ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿತು, ನಾನು ಸೋತೆ… ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ.ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಿಂದ ವಿನೇಶ್ ಅವರನ್ನು ಅನರ್ಹಗೊಳಿಸಲಾಯಿತು ಮತ್ತು ಬುಧವಾರ ಬೆಳಿಗ್ಗೆ 100 ಗ್ರಾಂ ಹೆಚ್ಚು ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಯಿತು.
ಒಲಿಂಪಿಕ್ ಕ್ರೀಡಾಕೂಟದ ಫೈನಲ್ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು.