Ad imageAd image

ಹಿಂದೂ ಧರ್ಮದ ಅವಹೇಳನ : ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಹಿಂದೂ ಧರ್ಮದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್ ನೀಡಿದೆ.

ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ನೀಡಿದ್ದು, ಆ.27 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. 2022 ರಲ್ಲಿ ವಕೀಲ ದಿಲೀಪ್ ದೂರು ದಾಖಲಿಸಿದ್ದರು.

ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ . ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ ಎಂದಿದ್ದರು. ಬೇಕಾದರೆ ಯಾರಾದರೂ ಗೂಗಲ್ ನಲ್ಲಿ ಸರ್ಚ್ ಮಾಡಿ ನೋಡಬಹುದು ಅಂತ ಅವರು ಹೇಳಿದ್ದರು.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!