Ad imageAd image

3 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಅಸ್ಥಿಪಂಜರ ಆತನ ಮನೆಯಲ್ಲಿಯೇ ಇತ್ತು 

Bharath Vaibhav
3 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಅಸ್ಥಿಪಂಜರ ಆತನ ಮನೆಯಲ್ಲಿಯೇ ಇತ್ತು 
WhatsApp Group Join Now
Telegram Group Join Now

ಧಾರವಾಡ: ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ ಪತ್ತೆಯಾಗಿದೆ. ಅದೂ ಧಾರವಾಡ ನಗರದಲ್ಲಿ ಅವರ ಸ್ವಂತ ಮನೆಯಲ್ಲೇ! ಶವ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಕಂಡುಬಂದಿದೆ.

ಧಾರವಾಡದ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ ಎಂಬ ಈ ವ್ಯಕ್ತಿ ಮೂರು‌ ವರ್ಷಗಳಿಂದ ಎಲ್ಲೂ ಕಾಣಿಸಿರಲಿಲ್ಲ. ಕಳೆದ ತಿಂಗಳು ಈತ ಕಾಣುತ್ತಿಲ್ಲ ಎಂದು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಒಬ್ಬರು ದೂರು ಕೊಟ್ಟಿದ್ದರು.

ಚಂದ್ರಶೇಖರ್‌ ಅವರನ್ನು ಎಲ್ಲ ಕಡೆ ಹುಡುಕಾಡಿದ್ದ ಪೊಲೀಸರು, ನಿನ್ನೆ ಅವರ ಮನೆಗೆ ಹೋಗಿದ್ದರು. ಅಲ್ಲಿ ಹೋದಾಗ‌ ಪೊಲೀಸರಿಗೆ ಅಚ್ಚರಿಯಾಗುವಂತೆ ಚಂದ್ರಶೇಖರ್ ಅಸ್ಥಿಪಂಜರ ಮನೆಯಲ್ಲೇ ಪತ್ತೆಯಾಗಿದೆ.ಚಂದ್ರಶೇಖರ್ ತಮ್ಮ ಪತ್ನಿಯ ಸಾವಿನ ನಂತರ ಮನೆಯಲ್ಲಿ ಒಬ್ಬನೇ ಇರುತ್ತಿದ್ದರು.

ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆಯೇ ಇವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಇದೆ. ಯಾರೂ ಇವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿರಲಿಲ್ಲ. ಸದ್ಯ ಅಸ್ಥಿಪಂಜರವನ್ನು ವಶಕ್ಕೆ ಪಡೆದ ಪೊಲೀಸರು, ಇದು ಅವರದೇನಾ ಎಂದು ತಿಳಿಯಲು ವಿಧಿವಿಜ್ಞಾನ ತಪಾಸಣೆಗೆ ಕಳಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!