ಮೊಳಕಾಲ್ಮುರು:-ಗ್ರಾಮದಲ್ಲಿ ಸುವ್ಯವಸ್ಥಿತವಾಗಿ ಚರಂಡಿ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಬಹುತೇಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ.ಮನೆಗೆ ಸೇರಿದ ಮಳೆ ನೀರನ್ನು ಹೊರಹಾಕಲು ರಾತ್ರಿಯಿಡೀ ಜನರು ನಿದ್ದೆಗೆಟ್ಟು ಪರದಾಡಿದ್ದಾರೆ.
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಗ್ರಾಮದ ಓಣಿಗಳು ಕೆರೆಯಂತಾಗಿ ಮಾರ್ಪಟ್ಟಿವೆ.ನೀರು ತುಂಬಿದ ಮನೆಗಳಲ್ಲಿ ದವಸ ದಾನ್ಯಗಳು,ಪೀಠೋಪಕರಣಗಳು ಹಾಗೂ ಪಾತ್ರೆ ಸೇರಿದಂತೆ ಇತರೆ ವಸ್ತುಗಳನ್ನು ನೀರಿನಲ್ಲಿ ತೇಲಿ ಹೋಗಿವೆ. ಮಳೆ ಕಡಿಮೆಯಾದ ನಂತರ, ಮನೆಯೊಳಗೆ ನುಗ್ಗಿದ್ದ ನೀರನ್ನು ಹೊರಹಾಕುವಲ್ಲಿ ನಿವಾಸಿಗಳು ನಿರತರಾಗಿದ್ದರು. ಕೆಲವರು, ತೇಲಿಹೋದ ವಸ್ತುಗಳಿಗಾಗಿ ಹುಡುಕಾಟ ನಡೆಸಿದರು.
ಮಳೆ ನೀರು ಹರಿದು ಅಂಬೇಡ್ಕರ್ ಕಾಲೋನಿಯ ಮನೆಗಳಿಗೆ ನೀರು ನುಗ್ಗಿ ಹಾನಿಯಾಗುತ್ತಿದ್ದರೂ ಇದರ ಬಗ್ಗೆ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ, ಯಾರೂ ಗಮನ ಹರಿಸುತ್ತಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಜೀವ ಹಾನಿಯಾದರೆ ಯಾರು ಹೊಣೆ’ ಎಂದು ಇಲ್ಲಿನ ನಿವಾಸಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ.ಗ್ರಾಮದಲ್ಲಿ ವ್ಯವಸ್ಥಿತವಾಗಿ ಚರಂಡಿ ನಿರ್ಮಿಸದ ಕಾರಣ ಈ ಅವಾಂತರ ಸೃಷ್ಟಿಯಾಗಿದ್ದು ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವರದಿ:- ಪಿಎಂ ಗಂಗಾಧರ್