ನಾಗಮಂಗಲ(ಮಂಡ್ಯ) : -ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ಮುಂದುವರಿದಿದೆ.ನಗರದ ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ನಾಗಮಂಗಲದ ಮಾವಿನಕೆರೆ ತೋಟದ ಮನೆಯೊಂದರಲ್ಲಿ ಭ್ರೂಣ ಹತ್ಯೆ ದಂಧೆ ಬೆಳಕಿಗೆ ಬಂದಿದೆ. ಸಕ್ಕರೆ ನಾಡಲ್ಲಿ ಬೇರೂರಿರುವ ಈ ಕರಾಳ ದಂಧೆಗೆ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದಾಗಲೇ ಡಿಹೆಚ್‍ಒ ಡಾ.ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಅಲ್ಲದೇ ಭ್ರೂಣ ಲಿಂಗ ಪತ್ತೆಗಾಗಿ ಕರೆತರಲಾಗಿದ್ದ ಹಾಸನ ಮೂಲದ ಗರ್ಭಿಣಿ ಮಹಿಳೆಯನ್ನು ಅಧಿಕಾರಿಗಳು ರಕ್ಷಿಸಿದ್ದಾರೆ, ನಿನ್ನೆ ತಡ ರಾತ್ರಿ ಡಿಹೆಚ್ಓ ಡಾ.ಮೋಹನ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದು. ದಾಳಿ ವೇಳೆ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿವೆ. ದಾಳಿ ವೇಳೆ ಹಾಸನ ಮೂಲದ ಗರ್ಭಿಣಿ ಮಹಿಳೆ ಸ್ಥಳದಲ್ಲಿದ್ದರು. ಆರೋಗ್ಯ ಇಲಾಖೆಯ ಗ್ರೂ ಡಿ ನೌಕರೆ, ಗರ್ಭಿಣಿಯ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಆಲೆಮನೆ ಹಾಗೂ ಹೆಲ್ತ್ ಕ್ವಾಟ್ರಸ್ ನಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ದಂಧೆ ನಡೆಯುತ್ತಿತ್ತು
ಈ ರೀತಿ ಆಗುತ್ತಿರುವುದು ಅಗೋಚರ ಎನಿಸುತ್ತಿದೆ ಆದರೆ ಸಂಬಂಧಪಟ್ಟ ಅಧಿಕಾರಿಗಳು ಇನ್ನು ಮುಂದಾದರು ಈ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಾರಾ ಎಂದು ಕಾದು ನೋಡಬೇಕಾಗಿದೆ
ವರದಿ:- ನಿತೀಶಗೌಡ ತಡಸ ಪಾಟೀಲ್