ಬೆಳಗಾವಿ: ಮಾನ್ಯ ಮುಖ್ಯ ಮಂತ್ರಿಗಳ ಪ್ರಗತಿ ಪರಿಶೀಲನೆಯ ನಂತರ ಜಿಲ್ಲೆಯಲ್ಲಿನ ವಸತಿ ಯೋಜನೆಯ ಪ್ರಸ್ತುತ ಪ್ರಗತಿ ಹೋಲಿಕೆ ಮಾಡಿದ್ದಲ್ಲಿ ಪ್ರಗತಿಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರುವುದಿಲ್ಲ ಸುಮಾರು 12,300/-ರಷ್ಟು ವಸತಿ ಮನೆಗಳು ಪ್ರಾರಂಭವಾಗದೆ ಇರುವುದು ಕಂಡು ಬಂದಿದ್ದು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ವಸತಿ ಯೋಜನೆಯ ಪ್ರಗತಿಯನ್ನು ತಾಲೂಕಿನಲ್ಲಿ ಪ್ರತ್ಯೇಕಾಗಿ ಪ್ರಗತಿ ಪರಿಶೀಲನಾ ಸಭೆ ಜರುಗಿಸುವುದರ ಮೂಲಕ ಪ್ರಗತಿ ಸಾಧಿಸಬೇಕೆಂದು ಅಧಿಕಾರಿ ಹಾಗೂ ತಾ.ಪಂ. ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಅ.16) ತಾಲ್ಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಸತಿ ಯೋಜನೆಯ ಫಲಾನುಭವಿ ಆಯ್ಕೆ ವಿಧಾನ ಸರಿಯಾದ ರೀತಿಯಲ್ಲಿ ಆಗಬೇಕು. ವಸತಿ ಯೋಜನೆಯ ಫಲಾನುಭವಿ ಆಯ್ಕೆಯಲ್ಲಿ ಮತ್ತು ಮನೆಯ ಜಿ.ಪಿ.ಎಸ್ ಮಾಡುವ ಸಂದರ್ಭದಲ್ಲಿ ದುಡ್ಡು ಕೇಳುತ್ತಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಅಂತಹ ದೂರುಗಳು ಜಿಪಂ ವರಗೆ ಬಂದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಕೆಲವೊಂದು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ವಸತಿ ಯೋಜನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಗತಿ ಮಾಡದೇ ಬಾಕಿ ಇಟ್ಟುಕೊಂಡಿರುವುದು ಮೇಲ್ನೂಟಕ್ಕೆ ಕಂಡು ಬಂದಿರುತ್ತದೆ ಅಂತಹ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಾರಣ ಕೇಳುವ ನೋಟಿಸ್ ನೀಡಲು ಮುಖ್ಯ ಯೋಜನಾಧಿಕಾರಿಗೆ ಮಾನ್ಯರು ಸೂಚನೆ ನೀಡಿದರು.
ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ್ ಅಡವಿಮಠ ರವರು ಮಾತನಾಡಿ ಕರ ವಸೂಲಾತಿಗೆ ಸಂಬಂಧಿಸಿದಂತೆ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿ ಹೆಚ್ಚಿನ ಪ್ರಮಾಣದಲ್ಲಿ ಕರ ವಸೂಲಾತಿ ಮಾಡಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿತ್ತು. ಆದರೂ ಸಹ ಕರ ವಸೂಲಾತಿ ಹೆಚ್ಚಿನ ಪ್ರಮಾಣದಲ್ಲಿ ಮಾಡದೇ ಪ್ರಗತಿ ಕುಂಠಿತವಾಗಿರುತ್ತದೆ. ಆದ ಕಾರಣ ಎಲ್ಲ ತಾಲೂಕಿನ ಸಹಾಯಕ ನಿರ್ದೇಶಕರು(ಪಂ.ರಾಜ್) ರವರನ್ನು ಬಳಸಿಕೊಂಡು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಪ್ರಸಕ್ತ ಸಾಲಿನ ಡಿಸೆಂಬರ ಅಂತ್ಯದವರೆಗೆ ಕರ ವಸೂಲಾತಿಯಲ್ಲಿ ಪ್ರತಿ ಶತ 100% ರಷ್ಟು ಪ್ರಗತಿ ಸಾಧಿಸಿ ಇಲ್ಲವಾದಲ್ಲಿ ತಮ್ಮ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯತಿವಾರು ಕರ ವಸೂಲಾತಿ ಪ್ರಕ್ರಿಯೆಯನ್ನು ಅಭಿಯಾನದ ರೀತಿ ಕೈಗೊಳ್ಳುವುದು ಹಾಗೂ ಈಗಾಗಲೇ ಸರ್ಕಾರದಿಂದ ನೀಡಲಾದ ನಿಯಮಾನುಸಾರ ಆಸ್ತಿಯ ಸ್ಥಳಕ್ಕೆ ಅನುಸಾರವಾಗಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಕರ ವಸೂಲಾತಿ ಬೇಡಿಕೆಯನ್ನು ನೀಡಬೇಕು ಎಂದು ಸೂಚಿಸಿದರು.
ಪ್ರಾಪರ್ಟಿ ಪ್ರೋಪೈಲ್ ನವೀಕರಣಕ್ಕೆ ಸಂಬಂಧಿಸಿದಂತೆ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಪಡೇಟ್ ಮಾಡಲು ತಿಳಿಸಿದರು ಹಾಗೂ ಕೆಲವೊಂದು ಡಿಲೀಟ್ ಮಾಡಬೇಕಾದಲ್ಲಿ ತಾಲೂಕುವಾರು ಪ್ರಾಪರ್ಟಿ ಐಡಿ ನಂಬರ ಮೂಲಕ ಲಿಸ್ಟ ಮಾಡಿ ಜಿಲ್ಲಾ ಪಂಚಾಯತಗೆ ಕಳಿಸಿ ಕೋಡಲು ತಿಳಿಸಿದರು. ಅದರ ಜೊತೆಗೆ ನೂತನ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿ ಪ್ರಗತಿ ಹಾಗೂ ಹಣ ಬಳಕೆ ಪ್ರಮಾಣ ಪತ್ರದ ಕುರಿತು ಸಂಬಂಧಿಸಿದ ತಾಲೂಕಿನ ಗ್ರಾಮ ಪಂಚಾಯತಿಗಳ ಮಾಹಿತಿ ಪಡೆದುಕೊಂಡರು. ಸಕಾಲದಲ್ಲಿ ಬರುವ ಇ-ಸ್ವತ್ತು ವಿಲೇವಾರಿಗೆ ಸಂಬಂಧಿಸಿದಂತೆ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ನಿಮ್ಮ ಹಂತದಲ್ಲಿ ಇದರ ಪ್ರಗತಿ ಪರಿಶೀಲನೆ ಮಾಡದೆ ಇರುವುದು ಕಂಡು ಬಂದಿರುತ್ತದೆ. ಇನ್ನೂ ಮುಂದೆ ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪ್ರಗತಿ ಸಾಧಿಸಸುವುದು.
15 ನೇ ಹಣಕಾಸು ವೆಚ್ಚದ ಕುರಿತು ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು(ಪಂ.ರಾಜ್)ರವರು ಗ್ರಾಮ ಪಂಚಾಯತಗಳಲ್ಲಿ ಕಾಮಗಾರಿಗಳು ಆದ ನಂತರ ಬಾಕಿ ಇರುವ 15 ನೇ ಹಣಕಾಸು ಬಿಲ್ಲುಗಳನ್ನು ಕೂಡಲೇ ವೆಚ್ಚ ಭರಿಸಲು ಸೂಚಿಸಿದರು.
ಸ್ವಚ್ಛ ಭಾರತ ಮಿಷನ್ ಯೋಜನೆಯ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ದಿನ ಕಸ ನಿರ್ವಹಣೆ ಕಾರ್ಯ ಪ್ರಗತಿಯಲ್ಲಿರುಬೇಕು. ದ್ರವ ತ್ಯಾಜ್ಯ ನಿರ್ವಹಣೆ ಘಟಕಗಳ ಸ್ಥಗಿತಗೊಂಡ ಕಾಮಗಾರಿಗಳನ್ನು ಪ್ರಾರಂಭಮಾಡಿ ಆದಷ್ಟು ಬೇಗ ಮುಕ್ತಾಯಗೊಳಿಸುವುದು. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಲ ತ್ಯಾಜ್ಯ ನಿರ್ವಹಣೆ ಘಟಕದ ಕಾಮಗಾರಿ ಮುಕ್ತಾಯಗೊಂಡಿದ್ದು ತ್ವರಿತವಾಗಿ ಅದನ್ನು ಪ್ರಾರಂಭಿಸಲು ಸಂಬಂಧಿಸಿದ ಅಧಿಕಾರಿಗೆ ಸೂಚಿಸಿದರು ಹಾಗೂ ಪ್ರಸಕ್ತ ಸಾಲಿನಲ್ಲಿ ವೈಯಕ್ತಿಕ ಶೌಚಾಲಯದ ಬೇಡಿಕೆ ಇದ್ದಲ್ಲಿ ಆನ್ ಲೈನ್ ಪೋರ್ಟಲ್ ನಲ್ಲಿ ಅರ್ಜಿ ಹಾಕಲು ಅವಕಾಶ ಕಲ್ಪಿಸಿದ್ದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇದರ ಕುರಿತು ಸ್ವಚ್ಛ ವಾಹಿನಿ ಮೂಲಕ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಎಲ್ಲ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಪಂ ಸಿಇಒ ರಾಹಲ್ ಶಿಂಧೆ ರವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ (ಡಿ.ಆರ್.ಡಿ.ಎ) ರವಿ ಎನ್ ಬಂಗಾರೆಪ್ಪನವರ, ಉಪಕಾರ್ಯದರ್ಶಿ(ಆಡಳಿತ) ಬಸವರಾಜ ಹೆಗ್ಗನಾಯಕ್, ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ ಜಿಲ್ಲೆಯ ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ಹಾಗೂ ಪಂಚಾಯತ್ ರಾಜ್ ಹಾಗೂ ಜಿ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.