ಬೆಳಗಾವಿ: ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹತ್ತರಗಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ನಿಶ್ಚಿತವಾಗಿ ಪ್ರಾಸಿಕ್ಯೂಷನ್ ಗೆ ಕೊಡುತ್ತಾರೆ ಎಂದುಕೊಂಡಿದ್ದೆವು.
ಅದೇ ರೀತಿ ಕೊಟ್ಟಿದ್ದಾರೆ. ಕಾನೂನು ಹೋರಾಟಕ್ಕೆ ನಾವು ಕೂಡ ಸಿದ್ದರಾಗಿದ್ದೇವೆ. ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯಪಾಲರ ಬಗ್ಗೆ ಈಗಾಗಲೇ ಸಾಕಷ್ಟು ಆರೋಪಗಳು ಇವೆ. ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ ರಾಜಭವನದಲ್ಲಿದೆ. ಬಿ.ಎಸ್.ವೈ. ಪ್ರಕರಣಕ್ಕೂ ಈ ಪ್ರಕರಣಕ್ಕೂ ವ್ಯತ್ಯಾಸವಿದೆ. ಸಿದ್ದರಾಮಯ್ಯ ಅವರನ್ನು ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿದೆ. ಬಿಜೆಪಿಯವರನ್ನು ಗಟ್ಟಿಯಾಗಿ ಎದುರಿಸುತ್ತಿದ್ದವರಿಗೆ ಈ ಪರಿಸ್ಥಿತಿ ತಂದಿದ್ದಾರೆ.
ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಸಿದ್ದರಾಮಯ್ಯ ಜೊತೆಗಿರುತ್ತೇವೆ. ಕೇಜ್ರಿವಾಲ್ ಆಯ್ತು, ಅದರ ಮುಂದುವರೆದ ಭಾಗ ಇದಾಗಿದೆ. ಬೇರೆಯವರು ಸಿಎಂ ಆಗುವ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಹೇಳಿದ್ದಾರೆ.