ಸಿರುಗುಪ್ಪ : –ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಾಡಳಿತ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಯಂತಿ ಕಾರ್ಯಕ್ರಮವನ್ನು ಗ್ರೇಡ್-2 ತಹಶೀಲ್ದಾರ್ ಸತ್ಯಮ್ಮ ಅವರು ಉದ್ಘಾಟಿಸಿದರು.
ನಂತರ ಮಾತನಾಡಿ ಅಸ್ಪಶ್ಯತೆ ಮತ್ತು ಶೋಷಿತ ವರ್ಗಗಳ ಪರವಾಗಿ ನಿಂತ ಶರಣಾದಿ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಾಗಿದ್ದಾರೆ. ಅವರ ಸಾಮಾಜಿಕ ಚಿಂತನೆ ಮತ್ತು ತತ್ವಾದರ್ಶಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಸಮಾಜದ ಮುಖಂಡರಾದ ಮಲ್ಲಯ್ಯ ಅವರು ಮಾತನಾಡಿ ಕೇರಳ ರಾಜ್ಯದಲ್ಲಿ ಶೋಷಿತ ವರ್ಗಗಳ ಹರಿಕಾರರೆಂದು ಕರೆಯಲಾಗುವ ಬ್ರಹ್ಮಶ್ರೀ ನಾರಾಯಣ ಗುರುಗಳು ಶೋಷಿತ ಸಮಾಜಕ್ಕೆಂದು ಬೇರೆ ದೇವಾಲಯವನ್ನು ನಿರ್ಮಿಸಿದ್ದು, ಅಂತಹ ವ್ಯಕ್ತಿಗಳು ಕೇವಲ ಒಂದು ಸಮುದಾಯಕ್ಕೆ ಹೋಲಿಸದೇ ಮುಂದಿನ ದಿನಗಳಲ್ಲಿ ವಿಜೃಂಭಣೆಯಿಂದ ಆಚರಿಸೋಣವೆಂದರು.
ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಗಾದಿಲಿಂಗಪ್ಪ ಮಾತನಾಡಿ ಆಯಾ ಸಮುದಾಯದಲ್ಲಿ ಜನಿಸಿದರೂ ಸಹ ಸಮಾಜಕ್ಕೆ ಉತ್ತಮ ಸಂದೇಶ ನೀಡಿರುವ ಶ್ರೇಷ್ಟ ವ್ಯಕ್ತಿಗಳ ಜಯಂತಿ ಕಾರ್ಯಕ್ರಮಕ್ಕೆ ಹೆಚ್ಚು ಹೆಚ್ಚು ಜನರು ಭಾಗವಹಿಸಿ ಅರ್ಥಪೂರ್ಣವಾಗಿ ಜಯಂತಿ ಕಾರ್ಯಕ್ರಮವನ್ನು ಮಾಡೋಣವೆಂದರು.
ಇದೇ ವೇಳೆ ಶಿರಸ್ತೆದಾರ ಸಿದ್ದಾರ್ಥ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ, ತಾಲೂಕು ಈಡಿಗ ಸಮಾಜದ ಅಧ್ಯಕ್ಷ ರಾಮಾಂಜಿನಿ, ಉಪಾಧ್ಯಕ್ಷ ಹುಲಿಯಪ್ಪ, ಕಾರ್ಯದರ್ಶಿ ಮಹೇಶ, ಸಂಘಟನಾ ಕಾರ್ಯದರ್ಶಿ ಇ.ಹಳ್ಳಪ್ಪ ಇನ್ನಿತರರಿದ್ದರು.
ವರದಿ :-ಶ್ರೀನಿವಾಸ ನಾಯ್ಕ