ಚಿಕ್ಕೋಡಿ:-ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ನಡೆದಿದೆ.
ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ(55) ಮೃತ ದುರ್ದೈವಿಯಾಗಿದ್ದಾರೆ.
ಮತ್ತೋರ್ವ ಕಾರ್ಮಿಕ ಜ್ಞಾನೋದಯಗೆ ಗಂಭೀರವಾಗಿ ಗಾಯವಾಗಿದೆ.ಗಾಯಗೊಂಡ ವ್ಯಕ್ತಿಗೆ ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಂಡರ್ ಸ್ಪೋಟದ ತೀವ್ರತೆಗೆ ಪಕ್ಕದ ಮನೆಯ ಗೋಡೆ ಕೂಡಾ ಕುಸಿತಗೊಂಡಿದೆ.ಗೋಡೆಯು ಮಕ್ಕಳಿಬ್ಬರ ಮೇಲೆ ಬಿದ್ದು ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳವಾಗಿವೆ.ಸದಲಗಾ ಪಟ್ಟಣದ ಆಸ್ಪತ್ರೆಯಲ್ಲಿ ಎರಡು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ :-ರಾಜು ಮುಂಡೆ