ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತಾ ನೋಟಿಸ್ ನೀಡಿದೆ.
ಅಕ್ರಮ ಹಣ ಗಳಿಕೆ ಪ್ರಕರಣ ಸಂಬಂಧ ಇಂದು ಸಂಜೆ ಒಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಡಿಸಿಎಂ ಡಿ.ಕೆಶಿವಕುಮಾರ್ ಲೋಕಾಯುಕ್ತಾ ನೋಟಿಸ್ ನೀಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಗೂ ಸಂಕಷ್ಟ ಎದುರಾಗಿದೆ.
2013ರ ಏಪ್ರಿಲ್ 1ರಿಂದ 2018ರರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.