ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿವೆ. ಜೈಲು ಸೂಪರಿಂಟೆಂಡೆಂಟ್ ಕೊಟ್ಟ ದೂರಿನ ಮೇರೆಗೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳು ಸೀನ ಹಾಗೂ ಮ್ಯಾನೇಜರ್ ನಾಗರಾಜ್ ಮೇಲೆ ಕೇಸ್ ದಾಖಲಾಗಿದೆ.
ಜೈಲಿನಲ್ಲಿ ಸಿಗರೇಟ್ ಕೊಟ್ಟಿದ್ದಕ್ಕೆ ಹಾಗೂ ವಿಡಿಯೋ ಮಾಡಿಕೊಂಡು ವೈರಲ್ ಮಾಡಿದ್ದಕ್ಕೆ, ಅಲ್ಲದೇ ಸಿಸಿಬಿ ಪೊಲೀಸರ ದಾಳಿ ವೇಳೆ ಕೆಲವು ವಸ್ತುಗಳನ್ನು ಮರೆಮಾಚಿದ್ದಕ್ಕೆ ಸಂಬಂಧಿಸಿ ಒಟ್ಟು ಒಟ್ಟು ಮೂರು ಪ್ರತ್ಯೇಕ ಕೇಸ್ಗಳು ಪರಪ್ಪನ ಅಗ್ರಹಾರ ಠಾಣೆಯಲ್ಲಿ ದಾಖಲಾಗಿವೆ. ಮೂರು ಕೇಸ್ಗಳಲ್ಲೂ ದರ್ಶನ್ನ ಆರೋಪಿಯನ್ನಾಗಿ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗದೆ.