Ad imageAd image

ಸೆಪ್ಟೆಂಬರ್ 02 ರಿಂದ ಎನಿವೇರ್ ಆಸ್ತಿ ನೋಂದಣಿ ಯೋಜನೆ ಜಾರಿ

Bharath Vaibhav
ಸೆಪ್ಟೆಂಬರ್ 02 ರಿಂದ ಎನಿವೇರ್ ಆಸ್ತಿ ನೋಂದಣಿ ಯೋಜನೆ ಜಾರಿ
krishna byre gowda
WhatsApp Group Join Now
Telegram Group Join Now

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ . 02 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ.

ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್‌ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್‌ 2 ರಿಂದ ರಾಜಾದ್ಯಂತ ಜಾರಿಯಾಗಲಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

‘ ಎನಿವೇರ್‌ ನೋಂದಣಿ ‘ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹು ಕಚೇರಿ ಆಯ್ಕೆ ಸಿಗಲಿದ್ದು, ಒಂದೇ ಕಚೇರಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇರುವುದಿಲ್ಲ.

ಏನಿದು ಏನಿವೇರ್‌ ರಿಜಿಸ್ಟ್ರೇಷನ್?

ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜನ ಸಂದಣಿ ಇಲ್ಲದ ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ತಮ್ಮ ಆಸ್ತಿ ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು “ಎನಿವೇರ್‌ ರಿಜಿಸ್ಟ್ರೇಷನ್” ವ್ಯವಸ್ಥೆಯ ಅಡಿಯಲ್ಲಿ ಸರ್ಕಾರ/ಕಂದಾಯ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸುವ, ಸಬ್‌ ರಿಜಿಸ್ಟ್ರಾರ್‌ ಕಚೇರಿ ಎದುರು ಜನರಿಗೆ ಕಾಯುವ ಶೋಷಣೆಯಿಂದ ಮುಕ್ತಿ ನೀಡುವ ಹಾಗೂ ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಎನಿವೇರ್‌ ರಿಜಿಸ್ಟ್ರೇಷನ್‌ ವ್ಯವಸ್ಥೆಯನ್ನು ಜಾರಿಗೆ ತರಲಾಯ್ತು.

ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಮೊದಲು ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳಲ್ಲಿ ಜಾರಿಗೆ ತರಲಾಗಿತ್ತು.

ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು ಬೆಂಗಳೂರು ನಗರದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವು ಮಾಡಿಕೊಡಲಾಗಿತ್ತು.

ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ.

ಜನರೂ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಈ ನೂತನ ಯೋಜನೆಯು ಸಾರ್ವಜನಿಕರಿಗೆ ಉಪಯುಕ್ತ ವ್ಯವಸ್ಥೆಯಾಗಿರಲಿದೆ. ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ. ಅಲ್ಲದೆ, ಕಚೇರಿ ನೋಂದಣಿ ಕೆಲಸವನ್ನೂ ಜಿಲ್ಲೆಯಾದ್ಯಂತ ಎಲ್ಲ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!