ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯ ಸರ್ಕಾರ ರಾಜಭವನದ ವಿರುದ್ಧ ಮತ್ತೊಂದು ಸಮರ ಹೂಡಿದ್ದು, ಇದೇ ಆಗಸ್ಟ್ 31 ರಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಹೋರಾಟ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಕೆಪಿಸಿಸಿ ಕಛೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ವಿರುದ್ಧ ಮತ್ತೆ ರಾಜ್ಯ ಸರ್ಕಾರ ಸಮರ ಹೂಡಿದ್ದು, ರಾಜಭವನ ಚಲೋ ಗೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಆಗಸ್ಟ್ 31ರಂದು ಬೆಳಿಗ್ಗೆ 10 ಗಂಟೆಗೆ ರಾಜಭವನ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ವಿಧಾನಸೌಧದಲ್ಲಿರುವಂತಹ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಹೋರಾಟ ನಡೆಯಲಿದ್ದು, ನಮ್ಮ ನಡಿಗೆಯಿಂದ ಯಾವ ಟ್ರಾಫಿಕ್ ತೊಂದರೆ ಇಲ್ಲದೆ, ವಿಧಾನಸೌಧದಿಂದ ರಾಜಭವನದ ವರೆಗೆ ಹೋಗಿ ಅವರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸುವಂತಹಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ.
ಕಾನೂನು ಚೌಕಟ್ಟಿನಲ್ಲಿ ನಮ್ಮಹೋರಾಟ ಇರಲಿದ್ದು, ರಾಜ್ಯಪಾಲರಿಗೆ ಆಹ್ವಾನ ಸ್ವೀಕಾರ ಮಾಡಲಿಕ್ಕೆ ಮನವಿ ಮಾಡುತ್ತೇವೆ. ನಮ್ಮ ಘನವೇತ್ತ ರಾಜ್ಯಪಾಲರಿಗೆ ಗೌರವ ಕೊಡಲೇಬೇಕು.
31ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭೆಯ ಸದಸ್ಯರು, ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಪಕ್ಷದ ಪರವಾಗಿ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಮುಖ್ಯಮಂತ್ರಿಗಳು ಸಹ ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.