Ad imageAd image

ಬೆಂಗಳೂರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.

ಬೆಳಗ್ಗೆ 6:57ರ ಸುಮಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.ಶಾಲೆ ಆವರಣದಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನ 1:30ಕ್ಕೆ ಬಾಂಬ್ ಬ್ಲಾಸ್ಟ್ ಆಗುತ್ತದೆ ಎಂದು ಮೇಲ್ ಮಾಡಲಾಗಿದೆ. ಮಾಹಿತಿ ಬಂದ ಕೂಡಲೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಗೋವಿಂದಪುರ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು, ಈ ವೇಳೆ ಯಾವುದೇ ರೀತಿಯ ಬಾಂಬ್ ಪತ್ತೆಯಾಗಿಲ್ಲ. ಈ ಕುರಿತು ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!