ಬೆಂಗಳೂರು :ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯಲಿದೆ.
ಇದಕ್ಕೂ ಮುನ್ನ ನ್ಯಾಯಮೂರ್ತಿ ಎಂ. ನಾಗ ಪ್ರಸನ್ನ ನೇತೃತ್ವದ ಪೀಠವು ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತ್ತು.
ಯಡಿಯೂರಪ್ಪ ಅವರನ್ನು ಬಂಧಿಸದಂತೆ ಪೀಠವು ಆದೇಶ ಹೊರಡಿಸಿದ್ದು, ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿಯನ್ನು ವಿಸ್ತರಿಸಿದೆ. ಇದೇ ವೇಳೆ ಸಂತ್ರಸ್ತೆಯ ಪರ ವಕೀಲರು ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ.