Ad imageAd image

ವಸತಿ ಶಾಲೆಯಲ್ಲಿಯೇ ನೇಣಿಗೆ ಶರಣಾದ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ

Bharath Vaibhav
ವಸತಿ ಶಾಲೆಯಲ್ಲಿಯೇ ನೇಣಿಗೆ ಶರಣಾದ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ
WhatsApp Group Join Now
Telegram Group Join Now

ಹಾವೇರಿ : ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆಯು ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ.

ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!