ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಭಾನುವಾರ ಭೇಟಿ ನೀಡಿ, ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಮುಕಂಜಿರಾ ಅವರನ್ನು ಸ್ವಾಗತಿಸಿದರು.ನಂತರ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಸಚಿವ ಸಂಪುಟ ಸಭಾಂಗಣವನ್ನು ಮುಕಂಜಿರಾ ವೀಕ್ಷಿಸಿದರು.
ವಿಧಾನಸಭೆ ಮತ್ತು ವಿಧಾನ ಪರಿಷತ್ ಕಾರ್ಯಚಟುವಟಿಕೆಗಳು ಹಾಗೂ ಸುವರ್ಣ ವಿಧಾನಸೌಧದಲ್ಲಿ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಕುರಿತು ಜಾರಕಿಹೊಳಿ ವಿವರಿಸಿದರು.