ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಹಿನ್ನೆಲೆಯಲ್ಲಿ ಪ್ರಕರಣವನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಇಂದು ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.
ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ರಕ್ಷಣೆಗೆ ನೀಡಿತ್ತು. ಇದೀಗ ಅಶೋಕ್ ನಾಯ್ಕ್ ಅವರು ಮಧ್ಯಂತರ ತಡೆ ಆದೇಶವನ್ನು ತೆರವು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2.30 ಕ್ಕೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.