Ad imageAd image

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ 

Bharath Vaibhav
ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ 
prajwal revanna
WhatsApp Group Join Now
Telegram Group Join Now

ಬೆಂಗಳೂರು: ಮನೆ ಕೆಲಸಕ್ಕೆ ಇದ್ದ ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕು ಮಹಿಳೆಯ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಹಿರಿಯ ವಯಸ್ಸಿನ ಮಹಿಳೆ ಬೇಡ ಬಿಟ್ಟು ಬಿಡಿ ಎಂದರೂ ಕೇಳದೆ ಪ್ರಜ್ವಲ್ ಅತ್ಯಾಚಾರ ಎಸಗೆ ಚಿತ್ರಿಕರಿಸಿಕೊಂಡಿದ್ದಾರೆ ಎಂದು ಎಸ್‌ಐಟಿ ವತಿಯಿಂದ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಈಗಾಗಲೇ ಪ್ರಜ್ವಲ್ ವಿರುದ್ಧ ಮೊದಲ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಅವರ ವಿರುದ್ಧ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ 1652 ಪುಟಗಳ ಆರೋಪ ಪಟ್ಟಿಯನ್ನು ಎಸ್‌ಐಟಿ ಸಲ್ಲಿಸಿದ್ದು, ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೃತ್ಯ ರುಜುವಾತಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!