ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಈ ಮೊದಲೇ ನಿಗದಿಯಾಗಿದ್ದಂತೆ ದೂರುದಾರರ ವಾದಕ್ಕೆ ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಉತ್ತರ ನೀಡಲಿದ್ದಾರೆ.
ಬಹುತೇಕ ಎಲ್ಲರ ವಾದ ಪ್ರತಿವಾದ ಮುಕ್ತಾಯವಾಗಿದ್ದು, ಅಭಿಷೇಕ್ ಸಿಂಘ್ವಿ ಅವರ ಉತ್ತರದ ಬಳಿಕ ನ್ಯಾಯಾಲಯ ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.
ಈ ನಡುವೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆಧರಿಸಿ ಸಿಎಂ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆಯಾಗಿದ್ದು, ತೀರ್ಪು ನೀಡುವವರೆಗೆ ಆದೇಶ ಮುಂದುವರೆಯಲಿದೆ.