ಮುದಗಲ್:– ವಕ್ಫ್ ಮಸೂದೆ ತಿದ್ದುಪಡಿ ವಿರೋಧಿಸಿ ಎಸ್.ಡಿ.ಪಿ.ಐ ರಾಯಚೂರು ರೂರಲ್ ,ಸಮಿತಿ ಮುದಗಲ್ ಪುರಸಭೆ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮುಖಂಡರಾದ ರಾಯಚೂರು ರೂರಲ್ ಅಧ್ಯಕ್ಷ ಎಂ.ಡಿ ರಫೀ ಖಾಜಿ ಮಾತನಾಡುತ್ತ ಕೇಂದ್ರ ಸರ್ಕಾರದ ಕೋಮುವಾದಿ ಅಜೆಂಡಾವನ್ನು ಎಸ್ ಡಿಪಿಐ ಪಕ್ಷ ಬಲವಾಗಿ ಪ್ರತಿಭಟಿಸುತ್ತದೆ. ಸರ್ಕಾರ ಸಂವಿಧಾನ ವಿರೋಧಿ ಕ್ರಮದಿಂದ ಹಿಂದೆ ಸರಿಯಬೇಕು. ವಕ್ಫ್ ಆಸ್ತಿಯ ಉಳಿವಿಗಾಗಿ ಯಾವುದೇ ತ್ಯಾಗಕ್ಕೂ ನಾವು ಸಿದ್ಧ. ಅಗತ್ಯ ಬಿದ್ದಲ್ಲಿ ಪ್ರಾಣ ಅರ್ಪಿಸಿ ವಕ್ಫ್ ಆಸ್ತಿ ಉಳಿಸುತ್ತೇವೆ.
ವಕ್ಫ್ ಆಸ್ತಿ ಮೇಲೆ ಬಿಜೆಪಿಗಾಗಲಿ ಯಾವುದೇ ಸರ್ಕಾರಕ್ಕಾಗಲಿ ಅಧಿಕಾರವಿಲ್ಲ. ಜೀವ ಭಯ ಬಿಟ್ಟು ಸಾವಿಗೂ ಹೆದರದೆ ಹೋರಾಟ ಮುಂದುವರೆಸುತ್ತೇವೆ. ವಕ್ಫ್ ಆಸ್ತಿಗಳು ಸಾರ್ವಜನಿಕ ಆಸ್ತಿ ಅಲ್ಲ. ಇದು ಮುಸ್ಲಿಂ ಸಮುದಾಯದ ಗಣ್ಯ ವ್ಯಕ್ತಿಗಳು ದಾನವಾಗಿ ನೀಡಿದ್ದು, ವಕ್ಫ್ ಆಸ್ತಿಯಾಗಿದೆ. ಸಮುದಾಯದ ಜನರು ಆರ್ಥಿಕವಾಗಿ ಸದೃಢವಾಗಲಿ ಎಂಬ ಸದುದ್ದೇಶದಿಂದ ವಕ್ಫ್ ಆಸ್ತಿಯಾಗಿ ಮಾರ್ಪಾಡಾಗಿದೆ” ಎಂದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐನ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮನವಿ ಪತ್ರವನ್ನು ಕಂದಾಯ ಇಲಾಖೆ ಅಧಿಕಾರಿ ದೀಪಿಕಾ ಸ್ವೀಕರಿಸಿದರು.
ಪಾಶ ಕಡ್ಡಿಪುಡಿ,ಹುಸೇನ್ , ಖಾಸೀಂ, ಫಾರೂಕ್ ದಾವೂದ್ ಬೇಗ್, ಮೌಲಾನಾ ಜಮೀರ್ ಖಾಜಿ, ಶಾಮೀದ್ ಸಾಬ , ವಸೀಮ್, ಅಬ್ದುಲ್ ಸಾಬ, ಮಹ್ಮದ್ ರಫೀ ಹಾಗೂ ಸಂಘಟನೆ ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ:- ಮಂಜುನಾಥ ಕುಂಬಾರ