Ad imageAd image

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ : ಸಿದ್ದರಾಮಯ್ಯ 

Bharath Vaibhav
ನನ್ನ ಜೀವನ ತೆರೆದ ಪುಸ್ತಕವಿದ್ದಂತೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ರಾಮನಗರ: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ – ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ.

ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಿದ್ದೆ. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ ಎಂದರು.

ಬಿಜೆಪಿಯವರು ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಆರೋಪಿಸಿದರು ರೈತರಿಂದ ಹಾಲು ಖರೀದಿಸಿ, ಅವರಿಗೆ ಹಣ ನೀಡುವುದು ಬೇಡವೇ? ಹಾಲಿನ ಪ್ರಮಾಣ ಹೆಚ್ಚಿಸಿ, ಅದಕ್ಕೆ ಸಮನಾಗಿ ಬೆಲೆ ಹೆಚ್ಚಿಸಿ ರೈತರಿಗೆ ನೆರವಾಗಿದ್ದು ತಪ್ಪಾ? ಹಾಲಿಗೆ 5 ರೂ. ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ಕೆಲವರು ತಾವು ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುತ್ತಾರೆ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

ಶಕ್ತಿ ಯೋಜನೆಯಡಿ 3.50 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು.

ನಮ್ಮ ಸರ್ಕಾರ ಹಾಲು ಉತ್ಪಾದಕರ, ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!