ಸೇಡಂ:- ತಾಲೂಕಿನ ಮುಧೋಳ್ ಗ್ರಾಮದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರ ವತಿಯಿಂದ ಪೌಷ್ಟಿಕ ಆಹಾರ ಶಿಬಿರ ಮತ್ತು ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಲಯ ಮೇಲ್ವಿಚಕರು ಪೌಷ್ಟಿಕ ಆಹಾರ ಸೇವನೆ ಬಗ್ಗೆ ಬಾಣಂತಿಯರಿಗೆ ಮಾಹಿತಿ ನೀಡಿದರು.
ಮುಧೋಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನಿವೇದಿತಾ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಧೋಳ್ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಮತ್ತು ಮಕ್ಕಳ ತಾಯಂದಿರು, ಗರ್ಭಿಣಿ ಬಾಣಂತಿಯರು, ಕಿಶೋರಿಯರು ಸೇರಿದಂತೆ ಇನ್ನಿತರರು ಇದ್ದರು.
ವರದಿ :-ವೆಂಕಟಪ್ಪ ಕೆ ಸುಗ್ಗಾಲ್.