Ad imageAd image

ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅಗತ್ಯ ಡಾ. ಆರ್. ಎಸ್ ದೊಡ್ಡನಿಂಗಪ್ಪಗೋಳ ಅಭಿಮತ

Bharath Vaibhav
ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅಗತ್ಯ ಡಾ. ಆರ್. ಎಸ್ ದೊಡ್ಡನಿಂಗಪ್ಪಗೋಳ ಅಭಿಮತ
WhatsApp Group Join Now
Telegram Group Join Now

ಅಥಣಿ : -ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿಕೊಡುವುದು ಅಗತ್ಯವಾಗಿದೆ ಎಂದು ಸಾಹಿತಿ ಡಾ. ಆರ್. ಎಸ್ ದೊಡ್ಡನಿಂಗಪ್ಪಗೋಳ ಹೇಳಿದರು.

ಅವರು ರವಿವಾರ ಸ್ಥಳೀಯ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಭಾಂಗಣದಲ್ಲಿ ಚಿಕ್ಕೋಡಿ ವಿಭಾಗದ ಗಂಗಾಮತಸ್ಥರ, ಕೋಳಿ ಸಮಾಜ ಸಂಘ, ವ್ಯಾಸ ಮಹರ್ಷಿ, ನಿಜಶರಣ ಅಂಬಿಗರ ಚೌಡಯ್ಯ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಅಥಣಿ ಇವರ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.

ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೇವಲ ಹೆಚ್ಚು ಅಂಕಗಳಿಸುವುದು ಸಾಧನೆ ಎನ್ನುವಂತಾಗಿದೆ. ನಮ್ಮ ಸುಂದರ ಬದುಕಿಗೆ ಕೇವಲ ಹೆಚ್ಚು ಅಂಕ ಮಾನದಂಡವಲ್ಲ, ಶಿಕ್ಷಣ ಜೊತೆಗೆ ಕಲಿಯುವ ಉತ್ತಮ ಸಂಸ್ಕಾರ, ನೈತಿಕ ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ನಮ್ಮ ಬದುಕಿನ ಮೌಲ್ಯವನ್ನು ಹೆಚ್ಚಿಸುತ್ತವೆ. ಅಂತಹ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ನೀಡಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಶಿಕ್ಷಣ ತಜ್ಞ, ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಿದಾಗ ಕನಸು ನನಸು ಮಾಡಿಕೊಳ್ಳಲು ಸಾಧ್ಯ. ಶಿಕ್ಷಣ ಕಲಿತವರಿಗೆಲ್ಲ ನೌಕರಿ ಸಿಗುತ್ತದೆ ಎನ್ನುವ ದಿನಗಳು ಈಗಿಲ್ಲ. ಜೀವನದಲ್ಲಿ ಯಾವುದೇ ಉದ್ಯೋಗ ಮಾಡಲಿ, ನಮ್ಮ ಬದುಕು ಮೌಲ್ಯಯುತವಾಗಿರಬೇಕು. ಅದಕ್ಕಾಗಿ ಉತ್ತಮ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವನ್ನು ರೂಡಿಸಿಕೊಳ್ಳಬೇಕು. ಕಲಿಸಿದ ಶಿಕ್ಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ಋಣಿಯಾಗಿರಬೇಕು. ತಂದೆ ತಾಯಿಗೆ ಒಳ್ಳೆಯ ಮಗನಾಗಿ ಅವರು ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮಾಡಬೇಕು. ಸಮಾಜದ ಹಿರಿಯರು ಪ್ರತಿಭಾ ಪುರಸ್ಕಾರ ನೀಡುವ ಉದ್ದೇಶ ನಿಮ್ಮ ಉತ್ತಮ ಸಾಧನೆ ಇನ್ನೊಬ್ಬರಿಗೆ ಪ್ರೇರಣೆ ಯಾಗುವುದರ ಜೊತೆಗೆ ತಮ್ಮಲ್ಲಿ ಕೂಡ ಇನ್ನಷ್ಟು ಸಾಧನೆ ಮಾಡಬೇಕೆಂಬ ಸ್ಪೂರ್ತಿ ತುಂಬುವ ಕಾರ್ಯವಾಗಿದೆ ಎಂದು ಹೇಳಿದರು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಬಕಾರಿ ಇಲಾಖೆಯ ಅಧಿಕ್ಷಕ ವಿನೋದ ಡಂಗೆ ಮಾತನಾಡಿ ಸಾಧನೆಗೆ ಬಡತನ ಅಡ್ಡಿಯಲ್ಲ, ಸಾಧಿಸಬೇಕೆಂಬ ಆತ್ಮ ವಿಶ್ವಾಸ, ಛಲ ಇದ್ದರೆ ಸಾಕು, ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಿರಂತರ ಅಭ್ಯಾಸ ಮತ್ತು ಸೂಕ್ತ ಮಾರ್ಗದರ್ಶನ ಪಡೆದುಕೊಂಡಾಗ ಸಾಧಕರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಹೇಳಿದ ಅವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಸರಳ ವಿಧಾನದಲ್ಲಿ ಎದುರಿಸುವ ಸಲಹೆಗಳನ್ನ ಮಕ್ಕಳಿಗೆ ತಿಳಿಸಿದರು. ಇಂತಹ ಪ್ರತಿಭಾ ಪುರಸ್ಕಾರ ಸಮಾರಂಭಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸ್ಪೂರ್ತಿ ತುಂಬುತ್ತವೆ. ಇಂತಹ ಕಾರ್ಯ ಪ್ರತಿವರ್ಷ ಯಶಸ್ವಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗಂಗಾಮತಸ್ಥ ಸಮಾಜದ ಹಿರಿಯರಾದ ಎಸ್ ಕೆ ಹೊಳೆಪ್ಪನವರ ವಾಸ್ತವಿಕವಾಗಿ ಮಾತನಾಡಿದರು.

 

ಈ ಸಂದರ್ಭದಲ್ಲಿ ಸಮುದಾಯದ ಹಿರಿಯ ಸಾಧಕರಿಗೆ ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಿಶೋರ ಶಿರಗೆ, ರಾಜೇಂದ್ರ ಕೋಳಿ, ಸುರೇಶ್ ಕೋಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಸ್ ಕೆ ಹೊಳೆಪ್ಪನವರ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕೈಲಾಸ ಮದಬಾವಿ ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ಹೊಳೆಪ್ಪನವರ ವಂದಿಸಿದರು.

ವರದಿ:- ರಾಜು. ಎಮ್. ವಾಘಮಾರೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!