ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ.ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಷೇನಾ ಅವರಿಗೆ ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.
ಇಂದು ಬೆಳಗ್ಗೆಯಷ್ಟೇ ತಮ್ಮ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಅತಿಶಿ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಘೋಷಿಸಿದ್ದರು.
ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿರುವ ಕೇಜ್ರಿವಾಲ್ ಅವರು ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದಿದ್ದರು.
ಎರಡು ದಿನಗಳ ಹಿಂದೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾನು ರಾಜೀನಾಮೆ ನೀಡುವುದಾಗಿ ಅವರು ಘೋಷಣೆ ಮಾಡಿದ್ದರು. ಅದರಂತೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ