ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿ ನ್ಯಾ. ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಅಟ್ರಾಸಿಟಿ, ಸುಲಿಗೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ವಿರುದ್ಧ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ಜೈಲು ಸೇರಿದ್ದರು.