ಚನ್ನಮ್ಮನ ಕಿತ್ತೂರು:- ಕಿತ್ತೂರು ಪಟ್ಟಣದ ಶಾಸಕರ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭೆ ಕಾರಂಜಿ ಕಾರ್ಯಕ್ರಮ ಜರುಗಿತ್ತು. ಈ ಕಾರ್ಯಕ್ರಮದಲ್ಲಿ ರಂಗೋಲಿ, ನೈತ ಚಿತ್ರ ಕಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವೈ ತುಬಾಕಿ ಅವರು ಮಾತನಾಡಿ ಮಕ್ಕಳು ತಮ್ಮ ಅತ್ಯದ್ಭುತವಾಗಿ ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು ಎಂದು ಹೇಳಿದರು. ಶಿಕ್ಷಣ ಸಂಯೋಜಕರಾದ ಮಹೇಶ ಹೆಗೆಡ, ಶಾಸಕರ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್ ಜಿ ಮುಂಡೆವಾಡಿ, ಎಲ್ಲ ಶಾಲೆಯು ಶಿಕ್ಷಕರು ಶಿಕ್ಷಕಿಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ- ಬಸವರಾಜ ಭೀಮರಾಣಿ. ಜಗದೀಶ ಕಡೋಲಿ