ಮೈಸೂರು : ರಾಜ್ಯದಲ್ಲಾಗುತ್ತಿರುವ ಗಲಭೆ ಪ್ರಕರಣಗಳ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾಗಮಂಗಲ ಹಾಗೂ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಹಾಗೂ ಕಲ್ಲು ತೂರಾಟ ನಡೆದ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ ಇದುವರೆಗೆ ಎರೆಡು ಪ್ರಕರಣ ನಡೆದಿವೆ ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಲಾಟೆ ನಡೆಯುತ್ತಿದೆ. ಬಿಜೆಪಿಯವರು ಕೋಮುವಾದಿಗಳು ಎಂದು ಸಿಎಂ ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ್ರು.
ಈಗಾಗಲೇ ಘಟನೆ ಕುರಿತು ನನಗೆ ಮಾಹಿತಿ ನೀಡಿರುವ ಗೃಹ ಸಚಿವರು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಪೊಲೀಸರೂ ಸಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಪಟ್ಟಂತೆ ನಾಗಮಂಗಲದಲ್ಲಿ ಇಬ್ಬರು ಪೊಲೀಸರನ್ನು ಅಮಾನತ್ತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ರು.