ಬೆಂಗಳೂರು : ಪೊಲೀಸ ಕಾನ್ಸ್ಟೇಬಲ್ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ.
ಕಾನ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ.
ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ.