ಬೆಂಗಳೂರು: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದ್ದು, ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ನಂದಿನಿ ತುಪ್ಪ ತಯಾರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಟಿಟಿಡಿ ನಂದಿನಿ ತುಪ್ಪ ಪೂರೈಕೆ ಮಾಡುವಂತೆ ಕೆಎಂಎಫ್ ಗೆ ಇ-ಮೇಲ್ ಮೂಲಕ ಮನವಿ ಮಾಡಿದ್ದು, ಹೀಗಾಗಿ ಕೆಎಂಎಫ್ ನಿಂದ ತಿರುಪತಿಗೆ ಮತ್ತಷ್ಟು ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಎಂಡಿ ಜಗದೀಶ್ ಹೇಳಿದ್ದಾರೆ.
ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಲ್ಯಾಬ್ ಪರೀಕ್ಷೆ ಮಾಡಿದ ಬಳಿಕ ನಂದಿನಿ ತುಪ್ಪ ಪೂರೈಸಲಾಗುವುದು.
ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ ಮಾಡಿರಲಿಲ್ಲ. ಇದೀಗ ಟಿಟಿಡಿ ಬೇಡಿಕೆಯ ಮೇರೆಗೆ ನಂದಿನಿ ತುಪ್ಪ ಪೂರೈಕೆ ಮಾಡಲಾಗುತ್ತಿದೆ. ಇಂದು ತಿಮ್ಮಪ್ಪನ ಕೃಪೆಯಿಂದ ಹೆಚ್ಚು ತಪ್ಪ ಪೂರೈಕೆ ಮಾಡುತ್ತಿದ್ದೇವೆ ಇದು ಕೆಎಂಎಫ್ ನ ಹೆಮ್ಮೆ ಎಂದು ತಿಳಿಸಿದ್ದಾರೆ.