ಬೆಂಗಳೂರು: ಮುಡಾ ಕೇಸ್ ತೀರ್ಪಿನ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇರಳಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ ಕೇರಳದ ಮಲಪ್ಪುರಂ ಜಿಲ್ಲೆಗೆ ಭೇಟಿ ನೀಡಲಿದ್ದು, ಇಲ್ಲಿ ನಡೆಯುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಇಂದು ಮಧ್ಯಾಹ್ನ 2.30ಕ್ಕೆ ಕೇರಳ ತಲುಪಲಿರುವ ಸಿದ್ದರಾಮಯ್ಯ, ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಲಿದ್ದಾರೆ. ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರ ಈ ನಡೆ ರಾಜಕೀಯವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ನಿನ್ನೆ ಮುಡಾ ಹಗರಣದ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.