ಚಿಕ್ಕೋಡಿ:- ತಾಲ್ಲೂಕಿನ ಶಿರಗಾವ ಗ್ರಾಮ ಹಾಗೂ ಸುತ್ತಮುತ್ತಲಿನ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿಯ ರಸ್ತೆಗಳಿಗೆ ಕಂಟಕವಾದ ಜಲ ಜೀವನ್ ಮಿಷನ್! ಗುತ್ತಿಗೆದಾರರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳಪೆ ಕಾಮಗಾರಿ.
ಜಲ ಜೀವನ್ ಮಿಷನ್, ಪ್ರತಿ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಆದರೆ ತ್ತಿಗೆದಾರರ,ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ , ಚರಂಡಿಗಳು ಹಾಳಾಗಿವೆ. ಎಲ್ಲೆಂದರಲ್ಲೇ ಕಾಂಕ್ರಿಟ್ ತ್ಯಾಜ್ಯ ಗುಡ್ಡೆ ಹಾಕಲಾಗಿದೆ. ಹಾಗೂ ಪೈಪ್ ಲೈನ್ ಆಳ ಸುಮಾರು 2 ವರಿ ಅಡಿಗಿಂತ ಹೆಚ್ಚಿಗೆ ಆಳದಲ್ಲಿ ಪೈಪ್ ಲೈನ್ ಅಳವಡಿಸಬೇಕಾಗದ್ದರು.
1 ಅಡಿಯಿಂದ 1 ವರೆ ಅಡಿವರೆಗೆ ನೆಲ ಹಡ್ಡಿ ಕೆಲಸಾ ಮಾಡಿದ್ದಾರೆ ಮತ್ತು ಕಾಮಗಾರಿ ವಿಳಂಬ ಮಾಡುವ ಜೊತೆಗೆ ಕಾಮಗಾರಿಗಳಿಗೆ ಬಳಸುತ್ತಿರುವ ಸಾಮಗ್ರಿಗಳು ಸಹ ಕಳಪೆಯಿಂದ ಕೂಡಿವೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ನಮ್ಮ ಕ್ಯಾಮೆರಾ ಕಣ್ಣಲ್ಲಿ ದೃಶ್ಯಗಳು ಸೆರೆಯಾಗಿವೆ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ.
ಈ ಯೋಜನೆಯನ್ನು ಜಾರಿಗೊಳಿಸಲು ಗ್ರಾಮದ ಮುಖ್ಯರಸ್ತೆಗಳನ್ನು ಅಗೆದು ತಿಂಗಳಾನು ಗಟ್ಟಲೆ ಹಾಗೆ ಬಿಟ್ಟಿದ್ದಾರೆ. ಇದರಿಂದಾಗಿ ರೋಗಿಗಳಿಗೆ,ವೃದ್ಧರು, ಕುರಿ ಮೇಕೆ, ದನಕರಗಳನ್ನು, ಕಾರು,ದ್ವಿಚಕ್ರ ವಾಹನಗಳ ಸುಗಮ ಸಂಚಾರಕ್ಕೆ ಅನಾನುಕೂಲವಾಗಿದ್ದು, ಅಧಿಕಾರಿಗಳು ಕೂಡಲೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸೂಚನೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರೆ.
ಏನಿದು ಯೋಜನೆ ತಾಲೂಕಿನ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಒದಸಗಿಸಲು ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು ಕೊಟ್ಯಂತರ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗುತ್ತಿಗೆದಾರರ ನಿರ್ಲಕ್ಷ್ಯ.
ಗ್ರಾಮೀಣ ರಸ್ತೆಗಳಿಗೆ ಕಂಟಕ ಏಕೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಗುತ್ತಿಗೆದಾರರು ಬೇಕಾದವರಿಗೆ ಹಂಚಿಕೆ ಮಾಡಿರುವುದರಿಂದ ಕಾಮಗಾರಿ ವಿಳಂಬವಾಗುವ ಜತೆಗೆ ಇಚ್ಛೆ ಬಂದಂತೆ ರಸ್ತೆಗಳನ್ನು ಅಗೆದು ಗುಂಡಿಗಳನ್ನು ಮುಚ್ಚದೆ ಹಾಗೆ ಬಿಟ್ಟು ಸಂಪೂರ್ಣ ರಸ್ತೆಗಳನ್ನು ಹಾಳು ಮಾಡಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ರಸ್ತೆಗಳಿಗೆ ಹಾನಿಯಾಗುತ್ತಿದ್ದರು, ಕಾಮಗಾರಿಗಳನ್ನು ವಿಳಂಬ ಮಾಡುವ ಜೋತೆಗೆ ಕಾಮಗಾರಿಗಳಿಗೆ ಬಳಸುತ್ತಿರುವ ಸಾಮಗ್ರಿಗಳು ಸಹ ಕಳಪೆಯಿಂದ ಕೂಡಿವೆ ಕಣ್ಣಿಗೆ ಕಂಡು ಬರುತ್ತಿದ್ದು ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆಂದು ಜನಆರೋಪಿಸಿದ್ದಾರೆ.,ಅಧಿಕಾರಿಗಳು,ಜನಪ್ರತಿನಿಧಿಗಳು ಈ ಕಳಪೆ ಗುಣಮಟ್ಟದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಕೈ ಜೋಡಿಸಿದ್ದಾರೆ ಅಥವಾ ರಾಜಕೀಯ ನಾಯಕರ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ
ವರದಿ:-ರಾಜು ಮುಂಡೆ